i
ಮುಂದಿನ ಮೂರು ದಿನಗಳ ಕಾಲ ಮಳೆ ಸಾಧ್ಯತೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ಮಾಂಡೌಸ್ ಚಂಡಮಾರುತದ ಪರಿಣಾಮ ಚೆನ್ನೈ ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ತಮಿಳುನಾಡಿನ ಚೆಂಗಲ್ಪಟ್ಟು, ವಿಲ್ಲುಪುರಂ ಮತ್ತು ಕಂಚೀಪುರಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈಗಾಗಲೇ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಚಂಡಮಾರುತ ತಮಿಳುನಾಡಿನ ಕರಾವಳಿಗೆ ಸಮೀಪಿಸುತ್ತಿದ್ದು, ಮಧ್ಯರಾತ್ರಿ ವೇಳೆ ಕರಾವಳಿ ದಾಟುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಚಂಡಮಾರುತ ಹಿನ್ನೆಲೆಯಲ್ಲಿ ಚೆನ್ನೈನಿಂದ ಹೊರಡಬೇಕಿದ್ದ 4 ವಿಮಾನಗಳನ್ನು ರದ್ದುಪಡಿಸಲಾಗಿದೆ.
ಮಾಂಡೌಸ್ ಚಂಡಮಾರುತದ ಪರಿಣಾಮ ಕರ್ನಾಟಕ ರಾಜ್ಯದ ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ಮೋಡ ಮುಚ್ಚಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.