i
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮುಖ್ಯ ಶಿಕ್ಷಕನಿಗೆ ದೊಣ್ಣೆಯಿಂದ ಮನಸೋ ಇಚ್ಛೆ ಥಳಿತ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿದ್ಯಾರ್ಥಿನಿಯರು ಕೈಯಲ್ಲಿ ದೊಣ್ಣೆ ಹಿಡಿದು ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯ ಶಿಕ್ಷಕನಿಗೆ ಮನಸೋ ಇಚ್ಛೆ ಥಳಿಸಿದ ವಿಡಿಯೊ ವೈರಲ್ ಆಗಿದೆ.
ಈ ಘಟನೆ ನಡೆದಿರುವುದು ಬೇರೆಲ್ಲೂ ಅಲ್ಲ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮದ ವಸತಿ ನಿಲಯದಲ್ಲಿ ನಡೆದಿದ್ದು ಈಗ ಮುಖ್ಯ ಶಿಕ್ಷಕ ಪೊಲೀಸರ ಅತಿಥಿಯಾಗಿದ್ದಾನೆ.
ವಿದ್ಯೆ, ಸನ್ನಡತೆ, ಸನ್ಮಾರ್ಗವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಬೇಕಾದ ಶಿಕ್ಷಕನೇ ಕಾಮುಕನ ರೀತಿ ವರ್ತಿಸುವ ಮೂಲಕ ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ ನಿರ್ಮಾಣವಾಗಿದೆ.
ಶಿಕ್ಷಕನ ವರ್ತನೆ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿನಿಯರು ಕೋಲು, ದೊಣ್ಣೆ ಹಿಡಿದು ಮನಸಾರೆ ಥಳಿಸುವ ಮೂಲಕ ಒನಕೆ ಓಬವ್ವಳ ಘಟನೆ ನೆನಪಿಸಿದ್ದಾರೆ.
ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮದ ವಸತಿ ನಿಲಯದ ಮುಖ್ಯಶಿಕ್ಷಕ ಚಿನ್ಮಯಾನಂದ ಮೂರ್ತಿ ಬುಧವಾರ ತಡರಾತ್ರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತಸಿದ್ದರಿಂದ ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿಯರು ಸಹಪಾಠಿಗಳಿಗೆ ಮಾಹಿತಿ ನೀಡಿ ನಂತರ ಕೈಯಲ್ಲಿ ಕೋಲು ದೊಣ್ಣೆ ಹಿಡಿದು ಕಾಮುಕ ಶಿಕ್ಷನ ಮೇಲೆ ದಾಳಿ ನಡೆಸಿದ್ದಾರೆ.
ಕೆ.ಆರ್.ಎಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ.