i
ಚಿತ್ರದುರ್ಗ-ತುಮಕೂರು-ದಾವಣಗೆರೆ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳು ಯಾರು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷ ತನ್ನ ಮೊದಲ 93 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.
ಒಟ್ಟು 93 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೋಮವಾರ ಪಕ್ಷದ ಕಚೇರಿಯಲ್ಲಿ ಬಿಡುಗಡೆ ಮಾಡಿದ್ದಾರೆ.
ಇಂದು ಪಟ್ಟಿಯನ್ನು ಬಿಡುಗಡೆ ಮಾಡಿರುವ ಪಟ್ಟಿಗೆ ಪಕ್ಷದ ಸಂಸದೀಯ ಮಂಡಳಿ ಮತ್ತು ಜೆಡಿಎಸ್ ರಾಷ್ಟ್ರೀಯ ವರಿಷ್ಠ ದೇವೇಗೌಡರ ಅವರ ಅನುಮೋದನೆಯ ಮೇರೆಗೆ 2023ನೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜನತಾದಳ ಪಕ್ಷದ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರುವುದಾಗಿ ಸಿ.ಎಂ.ಇಬ್ರಾಹಿಂ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಕೇವಲ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ. ಚಳ್ಳಕೆರೆ-ರವೀಶ್, ಹೊಸದುರ್ಗ ಕ್ಷೇತ್ರಕ್ಕೆ ಲಿಂಗಾಯಿತ ಕೋಮಿನ ಎಂ.ತಿಪ್ಪೇಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ. 93 ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಈ ಕೆಳಕಂಡಂತಿದೆ.