i
ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಂಬರುವ 2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಿದ್ದು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಸಿಎಂ ಹೆಚ್ . ಡಿ . ಕುಮಾರಸ್ವಾಮಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸೋಮವಾರ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಜೆಡಿಎಸ್ ನ 100 ಕ್ಕೂ ಹೆಚ್ಚು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದು ಎಚ್ಡಿಕೆ ತಿಳಿಸಿದ್ದಾರೆ.
ದೇವರ ಅನುಗ್ರಹ ಪಡೆದು 97 ರಿಂದ 116 ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಘೋಷಿಸಿದ್ದರು.