i
ಡಿಪ್ಲೋಮಾ ಪಾಸಾದವರಿಗೆ ನೂರಾರು ಹುದ್ದೆಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಿಪ್ಲೋಮಾ ಹುದ್ದೆಗೆ ನೇಮಕಾತಿ ಆರಂಭವಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದ ಹಲವು ರಾಜ್ಯಗಳಲ್ಲಿ ಡಿಪ್ಲೋಮಾ ಟ್ರೈನಿ ಹುದ್ದೆಗಳ ನೇಮಕಾತಿ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31.12.2022.
ವಿದ್ಯಾರ್ಹತೆ- ಸಿವಿಲ್ ಇಂಜಿನಿಯರ್ 23 ಹುದ್ದೆ , ಎಲೆಕ್ಟ್ರಿಕಲ್ ಇಂಜಿನಿಯರ್ 177 ಹುದ್ದೆ, ಇಲೆಕ್ಟ್ರಾನಿಕ್ ಕಮ್ಯುನಿಕೇಷನ್ 11 ಹುದ್ದೆ.
ಸಿವಿಲ್ ಇಂಜಿನಿಯರ್ ಹುದ್ದೆಗೆ ಅಭ್ಯರ್ಥಿಯು ಸಿವಿಲ್ ಇಂಜಿನಿಯರ್ ನಲ್ಲಿ ಕನಿಷ್ಠ 70 ಅಂಕಗಳೊಂದಿಗೆ 03 ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು.
ಎಲೆಕ್ಟ್ರಿಕಲ್ ಎಂಜಿನಿಯರ್ ಹುದ್ದೆಗೆ ಅಭ್ಯರ್ಥಿಯು ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ /ಪವರ್ ಸಿಸ್ಟಮ್ ಎಂಜಿನೀಯರಿಂಗ್/ಪವರ್ ಇಂಜಿನಿಯರ್ ನಲ್ಲಿ ಕನಿಷ್ಠ 70% ರಷ್ಟು ಅಂಕಗಳೊಂದಿಗೆ 03 ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು.
ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಅಭ್ಯರ್ಥಿಯು ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ ಎಲೆಕ್ಟ್ರಾನಿಕ್ಸ್ & ಟೆಲಿ-ಕಮ್ಯುನಿಕೇಶನ್/ ಎಲೆಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್ ಕಮ್ಯುನಿಕೇಶನ್/ಕಮ್ಯುನಿಕೇಶನ್ ಇಂಜಿನಿಯರಿಂಗ್ ನಲ್ಲಿ ಕನಿಷ್ಠ 70% ರಷ್ಟು ಅಂಕಗಳೊಂದಿಗೆ 03 ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಹೊಂದಿರಬೇಕು.