i
ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ಜ್ವರ ಎಂದು ಆಸ್ಪತ್ರೆಗೆ ತೆರಳಿದ್ದ 16 ವರ್ಷದ ಬಾಲಕಿ ಗರ್ಭಿಣಿಯಾಗಿರುವ ಸಂಗತಿ ಚಾಮರಾಜನಗರ ಜಿಲ್ಲೆ ಯಳಂದೂರಿನ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಯಳಂದೂರು ತಾಲೂಕಿನ ಗ್ರಾಮ ಒಂದರಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಉತ್ತರ ಭಾರತ ಮೂಲದ 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಆಕೆ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆಂದು ವೈದ್ಯರು ತಿಳಿಸಿದ್ದಾರೆ.
ಚಾಮರಾಜನಗರದ ಸರ್ಕಾರಿ ಆಸ್ಪತ್ರೆಗೆ ಅಪ್ರಾಪ್ತ ಬಾಲಕಿಯನ್ನು ಜ್ವರದ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿ ತಪಾಸಣೆ ನಡೆಸಿದಾಗ ಆಕೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದ್ದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.
ಜಿಲ್ಲಾಸ್ಪತ್ರೆಯ ವೈದ್ಯರು ಜಿಲ್ಲಾ ಮಹಿಳಾ ಸಾಂತ್ವನ ಕೇಂದ್ರಕ್ಕೆ ಮಾಹಿತಿ ನೀಡಿ ಕುಟುಂಬದವರೊಂದಿಗೆ ಆಪ್ತ ಸಮಾಲೋಚನೆ ನಡೆಸಲಾಗಿದ್ದು ಸಂತ್ರಸ್ತ ಬಾಲಕಿ ಸರಿಯಾದ ಮಾಹಿತಿ ನೀಡದ ಕಾರಣ ಆಕೆಯನ್ನು ಬಾಲಕಿಯರ ಮಂದಿರದಲ್ಲಿ ಇರಿಸಲಾಗಿದ್ದು, ಯಳಂದೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.