
ಗ್ರಾಮ ಪಂಚಾಯಿತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಿದರೆ ಗ್ರಾಮ ಪಂಚಾಯಿತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ಕಲ್ಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಅನಿಲ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಕ್ರಮವಾಗಿ 6000 ರೂ., 4000 ರೂ.ಹಾಗೂ 2,000 ರೂ. ಗೌರವ ಧನ ಪರಿಷ್ಕರಣೆ ನಿಗದಿ ಮಾಡಲಾಗಿದೆ. ಇದರೊಂದಿಗೆ ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ತಮ್ಮ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಪ್ರಯಾಣ ಭತ್ಯೆ ಮತ್ತು ದಿನ ಭತ್ಯೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು. ಕೋವಿಡ್ ನಂತರ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಸುಧಾರಣೆ ಆದರೆ ಗ್ರಾಪಂ ಸದಸ್ಯರುಗಳ ಗೌರವಧನ ಮತ್ತಷ್ಟು ಹೆಚ್ಚಳ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.