i
ಮಾಜಿ ಸಚಿವ ಜನಾರ್ದನ ರೆಡ್ಡಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತರಾ…?
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಜೆಡಿಎಸ್ ಪಕ್ಷ ಸೇರಲಿದ್ದಾರಾ ಎನ್ನುವುದು ಅತ್ಯಂತ ಕುತೂಹಲ ಕೆರಳಿಸಿದೆ.
ಮಾಜಿ ಸಚಿವ ಜನಾರ್ದನ ರೆಡ್ಡಿಯವರ ವಿಷಯದಲ್ಲಿ ಬಿಜೆಪಿ ನಾಯಕರು ಈವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಹಾಗಾಗಿ ರೆಡ್ಡಿ ಅವರಿಗೆ ಬೇಸರವಾಗಿದೆ ಎನ್ನಲಾಗುತ್ತಿದೆ. ಇದರ ಮಧ್ಯ ಜನಾರ್ದನ ರೆಡ್ಡಿ ಅವರು ಹೊಸ ರಾಜಕೀಯ ಪಕ್ಷ ಸ್ಥಾಪನೆ ಮಾಡಲಿದ್ದಾರೆಂದು ಹೇಳಲಾಗುತ್ತಿದೆ.
ಇದರ ಮಧ್ಯೆ ಮಾನ್ವಿಯ ಜೆಡಿಎಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಗಂಗಾವತಿಯ ಕನಕಗಿರಿ ರಸ್ತೆಯಲ್ಲಿರುವ ಜನಾರ್ದನ ರೆಡ್ಡಿಯವರ ನೂತನ ನಿವಾಸಕ್ಕೆ ಭೇಟಿ ನೀಡಿ ಇಬ್ಬರೇ ಗೌಪ್ಯ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದ್ದು ರೆಡ್ಡಿ ಅವರು ಜೆಡಿಎಸ್ ಸೇರುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ ಎಂದು ಹೇಳಲಾಗುತ್ತಿದೆ. ಜೆಡಿಎಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಪ್ರತಿಕ್ರಿಯಿಸಿದ್ದು ಯಾವುದೇ ರೀತಿಯ ರಾಜಕೀಯ ಚರ್ಚೆ ನಡೆದಿಲ್ಲ, ನಮ್ಮ ಸಂಬಂಧಿಕರ ಮದುವೆ ಲಗ್ನ ಪತ್ರಿಕೆ ನೀಡಲು ಬಂದಿದ್ದೆ ಎಂದು ಹೇಳಿದರಾದರೂ ಅನೇಕ ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿರುವುರು ಸುಳ್ಳಲ್ಲ ಎಂದು ಅರ್ಥೈಸಲಾಗುತ್ತಿದೆ.
ಇದರ ಮಧ್ಯೆ ಜನಾರ್ಧನ ರೆಡ್ಡಿಯವರು ಡಿಸೆಂಬರ್-25ರಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸುವುದಾಗಿ ಹೇಳಿದ್ದು ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದು, ತಮ್ಮ ಮುಂದಿನ ರಾಜಕೀಯ ನಡೆ ಕುರಿತು ಅಂದೇ ಬಹಿರಂಗಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.