i
ಗಣಿ ದಣಿಯ ಹೊಸ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಉದಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಸಚಿವ ಹಾಗೂ ಗಣಿ ಉದ್ಯಮಿ ಜಿ.ಜನಾರ್ದನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎನ್ನುವ ಹೊಸ ರಾಜಕೀಯ ಪಕ್ಷ ಘೋಷಿಸಿ ಬಿಜೆಪಿಗೆ ಸಡ್ಡು ಹೊಡೆದಿದ್ದಾರೆ.
ರೆಡ್ಡಿ ಅವರ ಮನೆ ಪಾರಿಜಾತದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಹೊಸ ರಾಜಕೀಯ ಪಕ್ಷದ ಘೋಷಣೆ ಮಾಡಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಅಭಿವೃದ್ಧಿಯೇ ನನ್ನ ಗುರಿ. ಸಾರ್ವಜನಿಕ ಜೀವನದಲ್ಲಿ ಏನೇ ಅಡೆತಡೆ ಬಂದರೂ ಮುನ್ನಡೆಯುತ್ತೇನೆ. ರಾಜ್ಯಾದ್ಯಂತ ಬೇರು ಮಟ್ಟದಲ್ಲಿ ಯುವ ಪಡೆಯೊಂದಿಗೆ ಹೊಸ ಪಕ್ಷ ಸಂಘಟನೆ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ನನ್ನ ಪಕ್ಷ ರಾಜ್ಯದ ಜನರ ಮನ ಗೆಲ್ಲಲಿದೆ. ಯಾವೆಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ ಎಂಬ ಬಗ್ಗೆ ಶೀಘ್ರದಲ್ಲೇ ಘೋಷಣೆ ಮಾಡುವುದಾಗಿ ಅವರು ಹೇಳಿದರು.
ನನ್ನ ರಾಜಕೀಯ ಜೀವನದಲ್ಲಿ ನನ್ನ ಪತ್ನಿಯೂ ಜೊತೆಗೆ ಇದ್ದು ಸಾರ್ವಜನಿಕ ಬದುಕಿನಲ್ಲಿ ಗುರುತಿಸಿಕೊಳ್ಳುತ್ತಾರೆ. ಬಿಜೆಪಿ ಸರ್ಕಾರ ಹಿಂದೆಯೂ ಟಾರ್ಗೆಟ್ ಮಾಡಿದೆ, ಮುಂದೆಯೂ ಟಾರ್ಗೆಟ್ ಮಾಡಲಿದೆ ಎಂದು ಅವರು ಹೇಳಿದರು.