i
ನಗರದಲ್ಲಿ ಮದ್ಯ ಮಾರಾಟ ನಿಷೇಧ ಮತ್ತು ಸೆಕ್ಷನ್ 144…
ಚಂದ್ರವಳ್ಳಿ ನ್ಯೂಸ್, ಮಂಗಳೂರು:
ಮಂಗಳೂರಿನ ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ನಗರದಾದ್ಯಂತ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು ಈ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿಯೊಂದಿಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶ ಮಾಡಿದೆ.
ಸಾರ್ವಜನಿಕರು ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುವ ಗಡುವು ನೀಡಿ ಜಲೀಲ್ ಮನೆ ಬಳಿ ಮೃತದೇಹದ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಸಾರ್ವಜನಿಕರ ಮನವೊಲಿಸಿ ಜಲೀಲ್ ಮೃತದೇಹವನ್ನು ದಫನ ಮಾಡಲು ಮಸೀದಿಗೆ ಕಳುಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಿರುವುದಲ್ಲದೆ ಎರಡು ದಿನಗಳ ಕಾಲ ಸುರತ್ಕಲ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಮಂಗಳೂರು ಪೋಲಿಸ್ ಕಮಿಷನರ್ ಎನ್.ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.