i
ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿರೋಧಿಸಿ ಧರಣಿ ಕೂತ ಮಠಾಧೀಶರು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಪ್ರಾಪ್ತ ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪೋಕ್ಸೋ ಪ್ರಕರಣದಡಿ ಆರೋಪಿಯಾಗಿ ಕಾರಾಗೃಹದಲ್ಲಿರುವ ಮುರುಘಾ ಶರಣ ಬೆಂಬಲಿಸಿ ಹಾಗೂ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿರುವುದನ್ನು ವಿರೋಧಿಸಿ ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೋಮವಾರ ಮಠಾಧೀಶರುಗಳು ಧರಣಿ ಕೂತಿದ್ದಾರೆ.
ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಶ್ರೀ ನೇತೃತ್ವದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿರುವ ಬಸವ ಕೇಂದ್ರದ 15 ಕ್ಕೂ ಹೆಚ್ಚು ಮಠಾಧೀಶರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಮುರುಘಾ ಮಠಕ್ಕೆ ಸರ್ಕಾರ ನೇಮಕ ಮಾಡಿರುವ ಆಡಳಿತಾಧಿಕಾರಿ ಆದೇಶ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.