i
ರಾಜ್ಯದಲ್ಲಿ ಮತ್ತೆ ಮಳೆ ಆತಂಕ ಮೋಡಕವಿದ ವಾತಾವರಣ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆಯಾಗುತ್ತಿರುವುದರಿಂದಾಗಿ ಕರ್ನಾಟಕ ರಾಜ್ಯದಲ್ಲಿ ಮತ್ತೆ ಮಳೆ ಆತಂಕ ಶುರುವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತವರಣ ನಿರ್ಮಾಣವಾಗಿದೆ.
ತಮಿಳುನಾಡು ತಿರುವಳ್ಳೂರು, ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ಮೈಲಾಡುತುರೈ, ನಾಗಪಟ್ಟಣಂ, ತಂಜಾವೂರು, ತಿರುವಾರೂರ್ ಮತ್ತು ಕಾರೈಕಲ್ ಜಿಲ್ಲೆಗಳಲ್ಲಿ ಇಂದು ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ. ಡಿಸೆಂಬರ್ 26ರಂದು ಕೇರಳದಲ್ಲಿ ಭಾರೀ ಮಳೆಯಾಗಲಿದೆ.