i
ಅಕ್ಕಿಗೆ ಮತ್ತು ಆರೋಗ್ಯಕ್ಕಾಗಿ ಪ್ರತ್ಯೇಕ ಬಿಪಿಎಲ್ ಕಾರ್ಡ್ ವಿತರಿಸಲು ಸರ್ಕಾರ ಚಿಂತನೆ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟವಾಗುವುದನ್ನು ತಡೆಯಲು ಪ್ರತ್ಯೇಕ ಬಿಪಿಎಲ್ ಕಾರ್ಡ್ ವಿತರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಬಿಪಿಎಲ್ ಕುಟುಂಬಗಳಿಗೆ ಅಕ್ಕಿ ಸಲುವಾಗಿಯೇ ಆಂಧ್ರಪ್ರದೇಶದ ಮಾದರಿಯಲ್ಲಿ ಪ್ರತ್ಯೇಕ ಬಿಪಿಎಲ್ ಕಾರ್ಡ್ ವಿತರಿಸಬೇಕೆಂದು ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ವತಿಯಿಂದ ಸರ್ಕಾರಕ್ಕೆ ಮಹತ್ವದ ಪ್ರಸ್ತಾವನೆ ಸಲ್ಲಿಸಲಾಗಿದೆ.
ಅನಾರೋಗ್ಯದ ಕಾರಣ ನೀಡಿ ಬಿಪಿಎಲ್ ಕಾರ್ಡ್ ಪಡೆಯುವವರ ಸಂಖ್ಯೆ ಹೆಚ್ಚಾಗಿದ್ದು, ಬಿಪಿಎಲ್ ಕಾರ್ಡ್ ಪಡೆದವರ ಹೆಸರಿನಲ್ಲಿ ಅಕ್ಕಿ ದುರುಪಯೋಗವಾಗುತ್ತಿದೆ. ಇದನ್ನು ತಪ್ಪಿಸಲು ಆಂಧ್ರದ ರೀತಿಯಲ್ಲಿ ಅಕ್ಕಿ ಮತ್ತು ಮೆಡಿಕಲ್ ಬಿಪಿಎಲ್ ಕಾರ್ಡ್ ಪ್ರತ್ಯೇಕವಾಗಿ ನೀಡಿ, ಸ್ವಯಂ ಚಾಲಿತವಾಗಿ ಅನುಷ್ಠಾನಕ್ಕೆ ತರಬೇಕೆಂದು ಸಮಿತಿ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.