i
ಹೆಣ್ಣು ಮಕ್ಕಳಿಗಾಗಿ ಅನುಪಾಲನಾ ಗೃಹ ಪ್ರಾರಂಭಿಸಲು ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಹೆಣ್ಣು ಮಕ್ಕಳಿಗಾಗಿ ಅನುಪಾಲನಾ ಗೃಹ ಆರಂಭಿಸಲು ಆಸಕ್ತ ಸ್ವಯಂಸೇವಾ ಸಂಸ್ಥೆಗಳಿಂದ ದ್ವಿಪ್ರತಿಯಲ್ಲಿ ಮರು ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ರೀತಿಯ ಸಂಕಷ್ಟಕ್ಕೆ ಒಳಗಾಗಿ ಪಾಲನೆ ಮತ್ತು ರಕ್ಷಣೆಗಾಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲಾದ ಮಕ್ಕಳಲ್ಲಿ 18 ವರ್ಷ ಪೂರ್ಣಗೊಂಡ ನಂತರ ಮಕ್ಕಳ ಪಾಲನಾ ಸಂಸ್ಥೆಗಳಿಂದ ಬಿಡುಗಡೆ ಹೊಂದುವ ಮಕ್ಕಳಿಗೆ 21 ವರ್ಷ ತುಂಬುವವರೆಗೆ ಅಥವಾ ವಿಶೇಷ ಸಂದರ್ಭಗಳಲ್ಲಿ ಹೆಚ್ಚುವರಿಯಾಗಿ 02 ವರ್ಷ ಪೂರ್ಣಗೊಂಡ ಹೆಣ್ಣು ಮಕ್ಕಳ ವಿದ್ಯಾಭ್ಯಾಸ ಮತ್ತು ವೃತ್ತಿಪರ ಕೌಶಲ್ಯ ತರಬೇತಿ ನೀಡಲು ಸ್ವಯಂ ಸೇವಾ ಸಂಸ್ಥೆಗಳ ನೆರೆವಿನೊಂದಿಗೆ ಪ್ರಾಯೋಗಿಕವಾಗಿ ಅನುಪಾಲನಾ ಗೃಹವನ್ನು ಪ್ರಾರಂಭಿಸಲಾಗುವುದು.
ಬೆಂಗಳೂರು ನಗರ ಜಿಲ್ಲೆಯ ಸ್ವಯಂಸೇವಾ ಸಂಸ್ಥೆಗಳಿಂದ ಪ್ರಾಸ್ತಾವನೆಯನ್ನು ಡಿಸೆಂಬರ್ 27 ರಿಂದ ಜನವರಿ 4ನೇ ತಾರೀಖಿನೊಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ನಗರ ಜಿಲ್ಲೆ ಎಂ.ಹೆಚ್ ಮರಿಗೌಡ ರಸ್ತೆ, ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳ ಸಂಕೀರ್ಣ, ಹೊಸೂರು ರಸ್ತೆ, ಕಿದ್ವಾಯಿ ಆಸ್ಪತ್ರೆ ಪಕ್ಕ, ಬೆಂಗಳೂರು-29. ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 080-29523458, 9108377782, 9448005639 ಹಾಗೂ ಇ-ಮೇಲ್ dcpoblor@gmail.com ನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.