ಕಾಲೇಜಿಗೆ ಕ್ರಿಸ್ ಮಸ್ ರಜೆ ಇದ್ದ ಕಾರಣ ಗೋವಾಕ್ಕೆ ಬಂದಿದ್ದ ಮುಂಬೈ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಚಾಲಕನನ್ನು ಬಂಧಿಸಲಾಗಿದೆ. ಮುಂಬೈನಿಂದ ಗೋವಾಕ್ಕೆ ಬಂದ 14 ಜನರ ಗುಂಪಿನ ಭಾಗವಾಗಿದ್ದ ವಿದ್ಯಾರ್ಥಿನಿ ಹಾಗೂ ತಂಡದವರು ಮಿನಿ ಬಸ್ ಬಾಡಿಗೆಗೆ ಪಡೆದಿದ್ದರು. ಗೋವಾದ 35 ವರ್ಷದ ಬಸ್ ಚಾಲಕನನ್ನು ಗೋವಾ ಪೊಲೀಸರು ಬಂಧಿಸಿ ವಿಚಾರಣೆಗೆ ಒಳ ಪಡಿಸಿದ್ದಾರೆ. ದಕ್ಷಿಣ ಗೋವಾದ ಮೊರ್ಮುಗಾವೊದ ಜುವಾರಿನಗರ ಪ್ರದೇಶದ ನಿವಾಸಿ ಶಂಕಿತ ಆರೋಪಿ ಚಂದ್ರಶೇಖರ್ ವಾಸು ಲಮಾಣಿ ಎಂದು ಪೊಲೀಸರು ಗುರುತಿಸಿದ್ದಾರೆ. ಚಾಲಕನನ್ನು ಸೋಮವಾರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.