i
ಕರಾಮುವಿ: ಬೋಧನಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2018-19, 2019-20, 2020-21 ಮತ್ತು 2021-22 ಜುಲೈ ಆವೃತ್ತಿ ಸಾಲಿನಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಸಕ್ತ 2022-23ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ವರ್ಷದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಸ್ಸಿ ಹಾಗೂ ತೃತೀಯ ವರ್ಷದ ಬಿ.ಎ/ಬಿ.ಕಾಂ ಮತ್ತು ಅಂತಿಮ ವರ್ಷದ ಎಂ.ಎ/ಎಂ.ಸಿ.ಜೆ/ಎಂ.ಕಾಂ/ಎಂ.ಎಸ್ಸಿ/ ಎಂ.ಬಿ.ಎ ಪದವಿಗಳ ನವೀಕರಣಕ್ಕಾಗಿ ಬೋಧನಾ ಶುಲ್ಕ ಪಾವತಿಸಲು ದಂಡ ಶುಲ್ಕವಿಲ್ಲದೆ ಇದೇ ಡಿಸೆಂಬರ್ 31ರ ವರೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ಕರಾಮುವಿಯ ವೆಬ್ಸೈಟ್ www.ksoumysuru.ac.in or http://ksouportal.com/views/StudentHome.aspx ಮೂಲಕ ಅನ್ಲೈನ್ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಬೋಧನಾ ಶುಲ್ಕ ಪಾವತಿಸಿ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಮೊದಲ ಪ್ರವೇಶಾತಿ ಪಡೆದಿದ್ದ ಕೇಂದ್ರ ಕಛೇರಿ ಅಥವಾ ಪ್ರಾದೇಶಿಕ ಕೇಂದ್ರಕ್ಕೆ ನಿಗದಿ ಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಸಿದ್ದಪಾಠಗಳನ್ನು ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್, ರಾಜೀವ್ಗಾಂಧಿ ನಗರ, ಮೆಳೆಕೋಟೆ, ಗಂಗಸಂದ್ರ ಮುಖ್ಯ ರಸ್ತೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ. ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.