i
SC ST ಸರ್ಕಾರಿ ನೌಕರರ ಮುಂಬಡ್ತಿಯಲ್ಲೂ ಮೀಸಲಾತಿ ಹೆಚ್ಚಳ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳು ಹಾಗೂ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ ಹೆಚ್ಚಳ ಮಾಡಿ ಕಳೆದ ಅಕ್ಟೋಬರ್ನಲ್ಲಿ ಸುಗ್ರೀವಾಜ್ಞೆ ಹೊರಡಿಸಿದ್ದ ರಾಜ್ಯ ಸರ್ಕಾರ ಈಗ ಸರ್ಕಾರಿ ನೌಕರರ ಮುಂಬಡ್ತಿಯಲ್ಲಿಯೂ ಈ ಮೀಸಲಾತಿ ಹೆಚ್ಚಳ ಜಾರಿಗೊಳಿಸಿ
ಡಿಸೆಂಬರ್ 28 ರಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ಎಸ್ಸಿ ಮೀಸಲಾತಿ ಶೇ. 15 ರಿಂದ 17ಕ್ಕೆ, ಎಸ್ಟಿ ಮೀಸಲಾತಿ ಶೇ.3ರಿಂದ 7ಕ್ಕೆ ಏರಿಸಿ, ಸಂವಿಧಾನದ 9ನೇ ಪರಿಚ್ಛೇದದ ಅಡಿಯಲ್ಲಿ ರಕ್ಷಣೆ ಪಡೆದು ಮೀಸಲಾತಿ ಘೋಷಣೆಗೆ ಸಂಬಂಧಪಟ್ಟಂತೆ ರಾಜ್ಯ ಪತ್ರ ಹೊರಡಿಸಲಾಗಿತ್ತು. ಈಗ ಎಸ್ಸಿ, ಎಸ್ಟಿ ಸರ್ಕಾರಿ ನೌಕರರ ಮುಂಬಡ್ತಿಯಲ್ಲೂ ಹೆಚ್ಚಳ ಮಾಡಿ ಜಾರಿ ಮಾಡಲಾಗಿದೆ. ಈ ಮುಂಬಡ್ತಿಯಲ್ಲಿ ಮೀಸಲಾತಿ ನೀಡುವ ಆದೇಶವು ತಕ್ಷಣದಿಂದ ಜಾರಿಗೆ ಬರುತ್ತಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.