i
ಮುರಾರ್ಜಿ ಕಿತ್ತೂರು ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗೆ ಉಚಿತ ತರಬೇತಿ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
2022- 23 ನೇ ಸಾಲಿನ ಮುರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದ್ದು ರಾಜ್ಯದಾದ್ಯಂತ ಏಕಕಾಲಕ್ಕೆ ನಡೆಯುವ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಯನ್ನು ಬರೆಯಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಹಿರಿಯೂರಿನ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಹಯೋಗದೊಂದಿಗೆ ದಿನಾಂಕ 29/ 12 /2022 ರ ಗುರುವಾರ ಬೆಳಗ್ಗೆ 10 ರಿಂದ 5 ಗಂಟೆಯ ವರೆಗೆ ಮಾರ್ಗದರ್ಶನ ತರಗತಿ ಏರ್ಪಡಿಸಲಾಗಿತ್ತು.
ಅರ್ಜಿ ಸಲ್ಲಿಸುವ ವಿಧಾನ, ಪ್ರವೇಶ ಪರೀಕ್ಷೆ ಎದುರಿಸಲು ಬೇಕಾದ ವಿಶೇಷ ಮಾಹಿತಿ, ಸಾಮಾನ್ಯ ಜ್ಞಾನ ಹಾಗೂ ಬೌದ್ಧಿಕ ಸಾಮರ್ಥ್ಯ ಘಟಕಗಳನ್ನು ಭೋಧಿಸಲಾಯಿತು.
ಜೊತೆಗೆ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ವಿದ್ಯಾರ್ಥಿಗಳಿಂದಲೇ ಕಾರ್ಯಕ್ರಮ ಉದ್ಘಾಟಿಸಲಾಯಿತು. ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಅವಕಾಶವನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮುಂದುವರಿಸಲು ಈ ಸಣ್ಣ ಅಳಿಲು ಸೇವೆ ಎಂದು ತಮ್ಮ ಸತತ 13 ನೇ ಕಾರ್ಯಗಾರವನ್ನು ಶಿಕ್ಷಕಿ ಹೇಮಲತ ರವರು ನಡೆಸಿಕೊಟ್ಟರು.