i
ಜಿಪಂ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಗೆ ಜಾಮೀನು ಮಂಜೂರು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕಾರಾಗೃಹದಲ್ಲಿರುವ ಮುರುಘಾ ಶರಣರ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅವರಿಗೆ ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಪಿತ್ತೂರಿ ಪ್ರಕರಣದಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಸೌಭಾಗ್ಯ ಬಸವರಾಜನ್ ಅವರನ್ನು ಡಿಸೆಂಬರ್ 15 ರಂದು ತಡ ರಾತ್ರಿ ದಾವಣಗೆರೆಯಲ್ಲಿ ಬಂಧಿಸಿದ್ದರು.
ಪಿತ್ತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಭಾಗ್ಯ ಬಸವರಾಜನ್ ಪರ ವಕೀಲ ದಾವಣಗೆರೆಯ ರಾಮದಾಸ್ ವಾದ ಮಂಡಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಭಾಗ್ಯ ಪತಿ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಅವರಿಗೆ ಹೈಕೋರ್ಟ್ ಕಳೆದ ವಾರ ಜಾಮೀನು ಮಂಜೂರು ಮಾಡಿತ್ತು. ಈಗ ಚಿತ್ರದುರ್ಗ ನ್ಯಾಯಾಲಯವು ಸೌಭಾಗ್ಯ ಅವರಿಗೆ ಜಾಮೀನು ಮಂಜೂರು ಮಾಡಿರುವುದರಿಂದ ಶನಿವಾರ ಅವರು ಬಿಡುಗಡೆಯಾಗುವ ಸಾಧ್ಯತೆ ಇದೆ.