i
ಪ್ರಧಾನಮಂತ್ರಿ ಮೋದಿ ತಾಯಿ ಹೀರಾ ಬೆನ್ ಇನ್ನಿಲ್ಲ…
ಚಂದ್ರವಳ್ಳಿ ನ್ಯೂಸ್, ಅಹಮದಾಬಾದ್:
ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಅವರು ಶುಕ್ರವಾರ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆಂದು ಟ್ವೀಟ್ ಮಾಡಿ ಪ್ರಧಾನಿ ಮೋದಿಯವರು ಮಾಹಿತಿ ನೀಡಿದ್ದಾರೆ.
ತಮ್ಮ ತಾಯಿ ಹೀರಾಬೇನ್ ಮೋದಿಯವರು ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಅಹಮದಾಬಾದ್ ನಗರದ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟರು. ಹೀರಾಬೆನ್ ಮೋದಿ ಅವರು 2022ರ ಜೂನ್ 18 ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿ, ಆಶೀರ್ವಾದ ಪಡೆದಿದ್ದರು. ತಾಯಿಯ ಪಾದ ತೊಳೆದು ಪೂಜಿಸಿದ್ದನ್ನ ನಾವು ಸ್ಮರಿಸಬಹುದಾಗಿದೆ.