i
ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಜಿಲ್ಲಾ ಪ್ರವಾಸ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಅವರು ಇದೇ ಜನವರಿ 7ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ್ ಅವರು ಜನವರಿ 7ರಂದು ಬೆಳಿಗ್ಗೆ 7ಕ್ಕೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 11ಕ್ಕೆ ಚಿತ್ರದುರ್ಗಕ್ಕೆ ಆಗಮಿಸುವರು. ಮಧ್ಯಾಹ್ನ 12ಕ್ಕೆ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಇಲಾಖೆಯ ಅಧಿಕಾರಿಗಳೊಂದಿಗೆ ಗಡಿ ಪ್ರಾಧಿಕಾರದ ಅನುದಾನದಿಂದ ಅನುಷ್ಠಾನಗೊಳಿಸಿರುವ ಕಾಮಗಾರಿಗಳ ಮತ್ತು ಹಣ ಬಳಕೆ ಪ್ರಮಾಣ ಪತ್ರಗಳ ಪರಿಶೀಲನೆ ಹಾಗೂ ಗಡಿಭಾಗದಲ್ಲಿನ ಅಭಿವೃದ್ಧಿ ಯೋಜನೆಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಭೆಯ ನಂತರ ಹಾವೇರಿಯಲ್ಲಿ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವರು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ತಿಳಿಸಿದ್ದಾರೆ.