i
ಸಿರಿಧಾನ್ಯ ಮತ್ತು ಸಾವಯವ- ಅಂತರರಾಷ್ಟ್ರೀಯ ವಾಣಿಜ್ಯ ಮೇಳ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿರಿಧಾನ್ಯ & ಸಾವಯವ- ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2023 ದ ರೋಡ್ ಶೋ ಮತ್ತು ರಾಜ್ಯದ ಸಾವಯವ ಹಾಗೂ ಸಿರಿಧಾನ್ಯಗಳಿಗೆ ಮಾರುಕಟ್ಟೆ, ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಅರಿವು ಮೂಡಿಸುವ ಮುಖ್ಯ ಉದ್ದೇಶಗಳೊಂದಿಗೆ ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯು ಬೆಂಗಳೂರಿನ ಅರಮನೆ ಆವರಣದ ತ್ರಿಪುರವಾಸಿನಿಯಲ್ಲಿ ಜನವರಿ 20 ರಿಂದ 22ರವರೆವಿಗೂ “ಸಿರಿಧಾನ್ಯ ಮತ್ತು ಸಾವಯವ –2023’’ ಅಂತರರಾಷ್ಟ್ರೀಯ ವಾಣಿಜ್ಯ ಮೇಳವನ್ನು ಆಯೋಜಿಸುತ್ತಿದೆ.
ಕಾರ್ಯಕ್ರಮದ ಪೂರ್ವಭಾವಿಯಾಗಿ ಮೇಳಕ್ಕೆ, ವ್ಯಾಪಕ ಪ್ರಚಾರ ನೀಡುವ ಉದ್ದೇಶದಿಂದ ಜನವರಿ 05 ರಂದು ಬೆಂಗಳೂರಿನ ವಸಂತನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಬೆಳಿಗ್ಗೆ 10 ಗಂಟೆಗೆ ರೋಡ್ ಶೋ ಕಾರ್ಯಕ್ರಮವನ್ನು ಉದ್ಘಾಟಿಸಿ, ನಂತರ ಮಾಧ್ಯಮ ಮಿತ್ರರೊಂದಿಗೆ ಪತ್ರಿಕಾ ಗೋಷ್ಠಿಯನ್ನು ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು, ಕೃಷಿ ಉತ್ಪನ್ನಗಳ ರಫ್ತುದಾರರು, ಮಾರುಕಟ್ಟೆದಾರರು, ಸಂಸ್ಕರಣೆದಾರರು ಹಾಗೂ ಸಾವಯವ ಮತ್ತು ಸಿರಿಧಾನ್ಯಗಳ ಇತರೆ ಪಾಲುದಾರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೇಳದ ವೆಬ್ಸೈಟ್ ಮತ್ತು ವೀಡಿಯೊವನ್ನು ಕಾರ್ಯಕ್ರಮದಲ್ಲಿ ಅನಾವರಣಗೊಳಿಸಲಾಗುವುದು ಎಂದು ಕೃಷಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.