i
ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತರ ಬಡಿದಾಟ…
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಇಬ್ಬರು ಮಹಿಳಾ ಕಾರ್ಯಕರ್ತರ ಗಲಾಟೆ ತೀವ್ರಗೊಂಡು ಮಾರಾಮಾರಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯ ನಗರದ ಹೊಟೇಲ್ನಲ್ಲಿ ನಡೆದ ಖಾಸಗಿ ಹೋಟೆಲ್ನಲ್ಲಿ ಜನವರಿ 3 ರಂದು ಕಾಂಗ್ರೆಸ್ ಪಕ್ಷದ ಸಭೆಯೊಂದು ನಡೆಸಲಾಗಿತು ಈ ಸಂದರ್ಭದಲ್ಲಿ ಹೊಸಪೇಟೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಯೋಗಲಕ್ಷ್ಮಿ ಮತ್ತು ಕಲ್ಯಾಣ ಕರ್ನಾಟಕ ಸಂಘಟನೆಯ ಕಾರ್ಯದರ್ಶಿ ಶಿಲ್ಪಾ ನಡುವೆ ಕೈಕೈ ಮಿಲಾಯಿಸುವ ಮಟ್ಟಕ್ಕೆ ಗಲಾಟೆ ನಡೆದಿತ್ತು. ಶಿಲ್ಪಾ ಮತ್ತು ಯೋಗಲಕ್ಷ್ಮಿ ಹಾಗೂ ಸಂದೀಪ್ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ಆಗಿತ್ತು.
ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಯೋಗಲಕ್ಷ್ಮಿ ಮತ್ತು ಇತರರ ವಿರುದ್ಧ ಶಿಲ್ಪಾ ಅವರು ದೂರು ಸಲ್ಲಿಸಿ ಜಾತಿನಿಂದನೆ ಮತ್ತು ಮಾನಹಾನಿ ಪ್ರಕರಣ ದಾಖಲಿಸಿದ್ದರು. ಮಹಿಳಾ ಕಾರ್ಯಕರ್ತೆಯ ಗಲಾಟೆ ಬೆನ್ನಲ್ಲೆ ಮಾರಾಮಾರಿ ನಡೆದಿದ್ದು ಇಬ್ಬರನ್ನು ಬಂಧಿಸಲಾಗಿದೆ ಎಂದು ಮಾಹಿತಿ ಇಳಿದು ಬಂದಿದೆ.