i
ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಯುವ ಲಹರಿ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಿಗಳ ಶಿವಮೊಗ್ಗ ಇವರ ವತಿಯಿಂದ ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಯುವ ಲಹರಿ ಮೂಲಕ 8ನೇ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವ ಆಯೋಜಿಸಲಾಗಿತ್ತು.
8ನೇ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿವಾಕರ್ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯ ಗೌರವಾನ್ವಿತ ವ್ಯವಸ್ಥಾಪಕ ಮಂಡಳಿ ಸದಸ್ಯರುಗಳು,ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಇತರರು ಭಾಗವಹಿಸಿದ್ದರು.