i
ಕನ್ನಡ ಹಬ್ಬಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ…
ಚಂದ್ರವಳ್ಳಿ ನ್ಯೂಸ್, ಹಾವೇರಿ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಇವರು ವತಿಯಿಂದ ಹಾವೇರಿಯ ಅಜ್ಜಯ್ಯ ದೇವಸ್ಥಾನದ ಎದುರು ಆರ್.ಟಿ.ಓ. ಕಛೇರಿ ಸಮೀಪ ಆಯೋಜಿಸಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟಿಸಿದರು.
ಹಾವೇರಿಯಲ್ಲಿ ಇಂದಿನಿಂದ ಆರಂಭವಾಗಿರುವ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಸಮ್ಮೇಳನಾಧ್ಯಕ್ಷ ಸಾಹಿತಿ ದೊಡ್ಡ ರಂಗೇಗೌಡ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಎಚ್.ಎಸ್. ವೆಂಕಟೇಶಮೂರ್ತಿ, ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಸುನಿಲ್ ಕುಮಾರ್, ಅರಬೈಲ್ ಶಿವರಾಮ್ ಹೆಬ್ಬಾರ್, ಸಂಸದ ಶಿವಕುಮಾರ್ ಉದಾಸಿ, ಶಾಸಕರಾದ ನೆಹರೂ ಒಲೇಕಾರ, ಶ್ರೀನಿವಾಸ ಮಾನೆ, ವಿಧಾನ ಪರಿಷತ್ ಸದಸ್ಯರಾದ ಪ್ರದೀಪ್ ಶೆಟ್ಟರ್, ಸಲೀಂ ಅಹಮದ್, ಎಸ್.ವಿ ಸಂಕನೂರು ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.