i
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 31 ರವರಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ಅಗತ್ಯ ದಾಖಲೆಗಳ ಮೂಲಕ https://ssp.karnataka.gov.in/ ಗೆ ಅರ್ಜಿ ಸಲ್ಲಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.