i
ಕಾಂಗ್ರೆಸ್ ಪಕ್ಷ ಸೇರಿದ ಜೆಡಿಎಸ್ ಮುಖಂಡರು…
ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡರು. ಈ ಸಂದರ್ಭದಲ್ಲಿ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮಂಡ್ಯ ವಿಧಾನಸಭಾ ಕ್ಷೇತ್ರದ ಮುಖಂಡ ಗಣಿಗ ರವಿಕುಮಾರ್ ಮನವಿ ಮಾಡಿದರು.
ತಾಲೂಕಿನ ಮುದ್ದಂಗೆರೆ ಗ್ರಾಮದ ಶ್ರೀ ಮುತ್ತುರಾಯಸ್ವಾಮಿ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ಜನಾಶೀರ್ವಾದ ಯಾತ್ರೆಯಲ್ಲಿ ಜೆಡಿಎಸ್ ತೊರೆದು ಬಂದ ಅವಿನಾಶ್ ಹಾಗೂ ಅವರ ಅಭಿಮಾನಿ ಬಳಗವನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡು ಮಾತನಾಡಿದರು.