i
ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ಅಭಿವೃದ್ಧಿ ನಿಗಮದ ಅಧಿಕಾರಿ ಬಂಧನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಲಂಚ ಪಡೆಯುತ್ತಿರುವಾಗಲೇ ಅಧಿಕಾರಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಬೆಂಗಳೂರಿನ ರಾಜಾಜಿನಗರದ ಅಂಬೇಡ್ಕರ್ ಅಭಿವೃದ್ಧಿ ನಿಗಮದ ತಾಲೂಕು ಅಭಿವೃದ್ಧಿ ಅಧಿಕಾರಿ ನಾರಾಯಣಪ್ಪ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದು ಲೋಕಾಯುಕ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪ್ರೇರಣಾ ಯೋಜನೆಯಡಿ ಸಾಲ ಪಡೆಯಲು ವ್ಯಕ್ತಿಯೊಬ್ಬರು ಅರ್ಜಿ ಹಾಕಿದ್ದರು. ಸಾಲ ಮಂಜೂರಾತಿಗೆ ಬಂದಿದ್ದ ಕಡತಗಳನ್ನು ವಿಲೇವಾರಿ ಮಾಡಲು ಅಧಿಕಾರಿ 3 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಅದರಂತೆ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಳು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ವಹಿಸಿದ್ದಾರೆ.