i
ಜವಾಹರ್ ನವೋದಯ ವಿದ್ಯಾಲಯಕ್ಕೆ ಪ್ರವೇಶ ಪರೀಕ್ಷೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜವಾಹರ್ ನವೋದಯ ವಿದ್ಯಾಲಯವು 2022-23 ನೇ ಸಾಲಿನ 6ನೇ ತರಗತಿಯ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಯನ್ನು 2023ನೇ ಏಪ್ರಿಲ್ 29 ರಂದು ಬೆಂಗಳೂರಿನ ಆಯ್ದ ಕೇಂದ್ರಗಳಲ್ಲಿ ನಡೆಸಲಾಗುವ್ಯದು.
ಈ ಪ್ರವೇಶ ಪರೀಕ್ಷೆಗೆ ಮಾನ್ಯತೆ ಪಡೆದ ಶಾಲೆಯಲ್ಲಿ 2022-23 ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಓದುತ್ತಿರುವ ಮಕ್ಕಳು ಅರ್ಹರಾಗಿರುತ್ತಾರೆ. ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ.
ಪರೀಕ್ಷೆಗೆ ಸಂಬಂಧಿಸಿದಂತೆ ವಿವರಣಾ ಪತ್ರ ಮತ್ತು ಮುಖ್ಯೋಪಾಧ್ಯಾಯರ ದೃಢೀಕರಣ ಪತ್ರವನ್ನು ನವೋದಯ ಸಮಿತಿಯ ವೆಬ್ ಸೈಟ್ www.navodaya.gov.in ನಿಂದ ಪಡೆದುಕೊಳ್ಳಬಹುದು. ಮುಖ್ಯೋಪಾಧ್ಯಾಯರ ದೃಢೀಕರಣ ಪತ್ರದೊಂದಿಗೆ ಅರ್ಜಿಯನ್ನು ಜನವರಿ 31 ರೊಳಗೆ ಆನ್ಲೈನ್ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಮಿತಿಯ ವೆಬ್ಸೈಟ್ www.navodaya.gov.in ಅಥವಾ ವಿದ್ಯಾಲಯದ ದೂರವಾಣಿ ಸಂಖ್ಯೆ 080-29900456/29900452 ಗೆ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.