i
ಪುರಸಭೆ ಮುಖ್ಯಾಧಿಕಾರಿ ಪತ್ನಿ ಅನುಮಾನಾಸ್ಪದ ಸಾವು…
ಚಂದ್ರವಳ್ಳಿ ನ್ಯೂಸ್, ಗದಗ:
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ವಿರುಪಾಪುರದಲ್ಲಿ ಪುರಸಭೆ ಮುಖ್ಯಾಧಿಕಾರಿ ಪತ್ನಿ ಅನುಮಾನಾಸ್ಪದ ಸಾವನ್ನಪ್ಪಿರೋ ಘಟನೆ ನಡೆದಿದೆ. ಸುನೀತಾ ಹಿರೇಮಠ(45) ಮೃತ ಮಹಿಳೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪುರಸಭೆಯ ಮುಖ್ಯಾಧಿಕಾರಿಯಾಗಿದ್ದ ಉಮೇಶ್ ಹಿರೇಮಠ ಅವರ ಮೇಲೆ ಕೊಲೆ ಆರೋಪ ಕೇಳಿ ಬಂದಿದೆ.
ಇದೊಂದು ಅಸಹಜ ಸಾವು. ಗಂಡ ಮತ್ತು ಅವರ ಮನೆಯವರು ನಮ್ಮ ಮಗಳಿಗೆ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ. ಹಿಂದೆ ಹಲವಾರು ಬಾರಿ ಜಗಳವಾಗಿ ಪೊಲೀಸರಿಗೂ ದೂರು ಕೊಡಲಾಗಿತ್ತು. ಈಗ ಮಗಳ ಸಾವಿನಲ್ಲಿ ಅನುಮಾನ ಇದೆ ತನಿಖೆಯಾಗಬೇಕು ಎಂದು ಕುಟುಂಬಸ್ಥರು ಒತ್ತಾಯ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪೊಲೀಸರು ಗಂಡ ಮತ್ತು ಮನೆಯವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.