i
ಡಿ.ಫಾರ್ಮ ಕೋರ್ಸಿನ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು, ಜನವರಿ 09 (ಕರ್ನಾಟಕ ವಾರ್ತೆ) :
ಔಷಧ ನಿಯಂತ್ರಣ ಇಲಾಖೆಯ ಪರೀಕ್ಷಾ ಪ್ರಾಧಿಕಾರ ಮಂಡಳಿ, ಬೆಂಗಳೂರು ವತಿಯಿಂದ 2022 – 23 ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಔಷಧ ವಿಜ್ಞಾನ ಮಹಾವಿದ್ಯಾಲಯ, ಬೆಂಗಳೂರು ಮತ್ತು ಕರ್ನಾಟಕದ ಖಾಸಗಿ ಡಿ.ಫಾರ್ಮಸಿ ವಿದ್ಯಾಸಂಸ್ಥೆಗಳಲ್ಲಿರುವ ಸರ್ಕಾರಿ ಕೋಟದಡಿಯಲ್ಲಿ ಪ್ರಥಮ ಡಿ.ಫಾರ್ಮ ಕೋರ್ಸಿನ ಸೀಟುಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಪರೀಕ್ಷಾ ಪ್ರಾಧಿಕಾರ ಮಂಡಳಿಯ ವೆಬ್ಸೈಟ್ನ www.beadpharmacy.org ಮೂಲಕ ಸಲ್ಲಿಸಬೇಕು. ಅರ್ಜಿಗಳನ್ನು ಜನವರಿ 20 ರೊಳಗೆ ಸಲ್ಲಿಸಬೇಕು. ಸೀಟು ಹಂಚಿಕೆಯ ಪ್ರಕ್ರಿಯೆಯ ದಿನಾಂಕ, ಸಮಯಗಳನ್ನು ವೆಬ್ಸೈಟ್ www.beadpharmacy.org ನಲ್ಲಿ ಪ್ರಕಟಿಸಲಾಗುವುದು. ವಿದ್ಯಾರ್ಹತೆ ದ್ವಿತೀಯ ಪಿಯುಸಿ (PCM / PCB) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22483465, 080-22222681 ಇ-ಮೇಲ್ beadpharmacy@yahoo.com and principal.gcp123@gmail.com ನ್ನು ಸಂಪರ್ಕಿಸಲು ಔಷಧ ನಿಯಂತ್ರಣ ಇಲಾಖೆ, ಪರೀಕ್ಷಾ ಪ್ರಾಧಿಕಾರ ಮಂಡಳಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದರು.