i
ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲ್ಲೂಕು ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಇದೇ ಜನವರಿ 11ರಂದು ಚಿತ್ರದುರ್ಗ ಜಿಲ್ಲಾ ಕ್ರೀಡಾಂಗಣದಲ್ಲಿ 2022-23ನೇ ಸಾಲಿನ ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟಡದ ಸ್ಪರ್ಧೆಗಳಾದ ಯೋಗ, ಖೋಖೋ, ಕಬಡ್ಡಿ, ವಾಲಿಬಾಲ್ ಮತ್ತು ಕುಸ್ತಿ ಕ್ರೀಡೆಯನ್ನು ಏರ್ಪಡಿಸಲಾಗಿದೆ.
ಆಯಾ ತಾಲ್ಲೂಕಿನ ತಾಲ್ಲೂಕುಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ವಿಜೇತರಾಗಿ ಪ್ರಥಮ ಸ್ಥಾನ ಪಡೆದ ಯುವಕ ಮತ್ತು ಯುವತಿಯರು ಮಾತ್ರ ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ತಾಲ್ಲೂಕುಮಟ್ಟದ ಗ್ರಾಮೀಣ ಕ್ರೀಡಾಕೂಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸದೇ ಇರುವವರು ನೇರವಾಗಿ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.
ಚಿತ್ರದುರ್ಗ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಛಾಯಾಚಿತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯೊಂದಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 11ರಂದು ಬೆಳಿಗ್ಗೆ 9ಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.
ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಊಟೋಪಹಾರ ವ್ಯವಸ್ಥೆಯನ್ನು ಇಲಾಖೆಯ ವತಿಯಿಂದ ಮಾಡಲಾಗುವುದು. ಕ್ರೀಡಾಪಟುಗಳಿಗೆ ಪ್ರಯಾಣಭತ್ಯೆಯನ್ನು ಇಲಾಖೆಯ ವತಿಯಿಂದ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ 08194-235635 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.