i
ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ನೇಣಿಗೆ ಶರಣು…
ಚಂದ್ರವಳ್ಳಿ ನ್ಯೂಸ್, ಕೊಡಗು:
ಮಡಿಕೇರಿಯ ವೈದ್ಯಕೀಯ ವಿಜ್ಞಾನಗಳ ಕಾಲೇಜಿನಲ್ಲಿ ಪ್ಯಾರಾಮೆಡಿಕಲ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡು ದುರಂತ ಅಂತ್ಯ ಕಂಡಿರುವ ಜಸ್ಮಿತಾ(19) ಮೃತ ವಿದ್ಯಾರ್ಥಿನಿ. ಕೊಡಗಿನ ಕುಶಾಲನಗರದ ಸಂತೋಷ್ ಎಂಬುವವರ ಪುತ್ರಿ ಜಸ್ಮಿತಾ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಡಿಕೇರಿಯ ಮೆಡಿಕಲ್ ಕಾಲೇಜಿನಲ್ಲಿ ಪ್ಯಾರಾಮೆಡಿಕಲ್ ಓದುತ್ತಿದ್ದ ಜಸ್ಮಿತಾ ಓದಿನಲ್ಲಿ ಮುಂದಿದ್ದಳು. ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಘಟನೆ ಕುರಿತು ಕುಶಾಲನಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಂದು ಸ್ಥಳ ಪರಿಶೀಲನೆ ಮಾಡಿದ್ದಾರೆ. ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.