i
ಪಕ್ಷ ವಿರೋಧಿಗಳ ವಿರುದ್ಧ ಸಿಡಿದ ಜೆಡಿಎಸ್, ಹಲವರ ಉಚ್ಛಾಟನೆ…
ಚಂದ್ರವಳ್ಳಿ ನ್ಯೂಸ್, ವಿಜಯಪುರ:
ಕರ್ನಾಟಕ ವಿಧಾನಸಭೆ ಚುನಾವಣೆ ಕೆಲವೇ ತಿಂಗಳಗಳು ಬಾಕಿ ಇರುವಂತ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಜೆಡಿಎಸ್ನಲ್ಲಿ ಮಹತ್ವದ ಬೆಳವಣಿಗಗಳು ನಡೆದಿದ್ದು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಆರು ಮಂದಿ ಜೆಡಿಎಸ್ ಮುಖಂಡರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾದೆ.
ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ವಿಜಯಪುರ ಜೆಡಿಎಸ್ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ ಆರು ಮುಖಂಡರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.
ವಿಜಯಪುರ ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಸ್ನೇಹಲತಾ ಶೆಟ್ಟಿ, ಅಲ್ಪ ಸಂಖ್ಯಾತ ಘಟಕ ಜಿಲ್ಲಾಧ್ಯಕ್ಷ ಯಾಕೂಬ್ ಕೂಪರ್, ಜಿಲ್ಲಾ ಅಲ್ಪ ಸಂಖ್ಯಾತ ಘಟಕ ಕಾರ್ಯಾದ್ಯಕ್ಷ ದಸ್ತಗೀರ ಸಾಲೋಟಗಿ, ಅಲ್ಪ ಸಂಖ್ಯಾತ ಘಟಕ ನಗರ ಆಧ್ಯಕ್ಷ ಸಂಶುದ್ದಿನ ಮುಲ್ಲಾ, ಯೂತ್ ಘಟಕದ ಜಿಲ್ಲಾಧ್ಯಕ್ಷ ಸಿದ್ಧನಗೌಡ ಪಾಟೀಲ್, ಸಿಂದಗಿ ಕ್ಷೇತ್ರದ ಮುಖಂಡ ಅಕ್ಬರ್ ಮುಲ್ಲಾ ಎನ್ನುವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ವಿಜಯಪುರ ನಗರದಲ್ಲಿರುವ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ನಡೆಸಿ ಮಾತನಾಡಿದ ಬಸನಗೌಡ ಮಾಡಗಿ, ಕಳೆದ ಒಂದು ವರ್ಷದಿಂದ ಜೆಡಿಎಸ್ ಪಕ್ಷದ ಕೆಲ ಪದಾಧಿಕಾರಿಗಳು ಹಾಗೂ ಮುಖಂಡರು ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿದ್ದ ಕಾರಣ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಕಳೆದ ಒಂದು ವರ್ಷದಿಂದ ಪಕ್ಷ ವಿರೋಧಿ ಚಟುವಟಿಕೆ ಮಾಡಿಕೊಂಡು ಬಂದಿದ್ದರು. ಹಲವಾರು ಬಾರಿ ಎಚ್ಚರಿಕೆ ನೀಡಿದ್ದರೂ ಅವರು ಪಕ್ಷ ವಿರೋಧಿ ಚಟುವಟಿಕೆ ನಿಲ್ಲಿಸಿರಲಿಲ್ಲ. ಆದ್ದರಿಂದ ಪಕ್ಷದ ಹಿತದೃಷ್ಟಿಯಿಂದ ಉಚ್ಛಾಟಿಸಲಾಗಿದೆ ತಿಳಿಸಿದರು.