i
ಒಕ್ಕಲಿಗ-ಪಂಚಮಸಾಲಿಗಳಿಗೆ ವಾರದೊಳಗೆ ಮೀಸಲಾತಿ ಜಾರಿ…
ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಪಂಚಮಸಾಲಿ ಹಾಗೂ ಒಕ್ಕಲಿಗ ಸಮಾಜಗಳಿಗೆ ನೂರಷ್ಟು ಮೀಸಲಾತಿ ಜಾರಿ ಮಾಡಲಾಗುತ್ತದೆ, ಯಾವುದೇ ಕಾರಣಕ್ಕೂ ಅನುಮಾನಬೇಡು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಊಹಾಪೋಹಗಳಿಗೆ ಕಿವಿಗೊಡಬೇಡಿ, ಬಿಜೆಪಿ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಎಲ್ಲ ಸಮಾಜಗಳಿಗೆ ಸಾಮಾಜಿಕ ನ್ಯಾಯ ನೀಡಲಿದೆ ಎಂದು ತಿಳಿಸಿದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಕಾಂತರಾಜ್ ಸಮಿತಿ ರಚಿಸಲಾಗಿತ್ತು. ಆರ್ಥಿಕವಾಗಿ ಹಿಂದುಳಿದ ವರ್ಗಗಳಿಂದ ಬಂದವರನ್ನು ಕೋಟಾದ ಅಡಿಯಲ್ಲಿ ಸೇರಿಸಬೇಕೆಂದು ಹಿಂದುಳಿದ ವರ್ಗಗಳ ಸಮಿತಿ ವರದಿಯಲ್ಲಿ ಹೇಳಿದೆ. ಪಂಚಮಸಾಲಿ, ಒಕ್ಕಲಿಗರಿಗೆ ಒಂದು ವಾರದೊಳಗೆ ಮೀಸಲಾತಿ ಒದಗಿಸುವ ಕೆಲಸ ಮಾಡಲಾಗುವುದು ಎಂದರು.
ಸಿಎಂ ಬೊಮ್ಮಾಯಿ ಮುಂದುವರೆದು ಮಾತನಾಡಿ, ಮೀಸಲಾತಿ ವಿವಾದದ ಲಾಭ ಪಡೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ, ಕಾಂತರಾಜ್ ಆಯೋಗ ಪಂಚಮಸಾಲಿಗಳಿಗೆ 2ಎ ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ತಿರಸ್ಕರಿಸಿದೆ. ಈಗ ಕಾಂಗ್ರೆಸ್ಸಿಗರು ಮೀಸಲಾತಿಯಲ್ಲಿ ರಾಜಕೀಯ ಮಾಡುತ್ತಿದ್ದಾರೆಂದು ವಾಗ್ದಾಳಿ ಮಾಡಿದರು.
ಬಿಜೆಪಿ ಸರ್ಕಾರ ರೈತರು, ಬಡವರು, ಪರಿಶಿಷ್ಟ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಗಮನ ನೀಡಿದೆ. ಪತನದ ಅಂಚಿನಲ್ಲಿರುವ ಕಾಂಗ್ರೆಸ್ ಕಾಂಗ್ರೆಸ್ ಉಚಿತ ಘೋಷಣೆ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಗರಂ ಆದರು.