i
JEE/NEET ತರಬೇತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಸತಿಯುತ JEE/NEET Long Term ತರಬೇತಿಯನ್ನು ಬೆಂಗಳೂರು ಅಥವಾ ಮಂಗಳೂರು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ತರಬೇತಿಗೆ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾಲಾವಕಾಶ ಕಲ್ಪಿಸಲಾಗಿದೆ.
ಅರ್ಜಿಗಳನ್ನು ಜನವರಿ 12 ರಿಂದ 31 ರವರೆಗೂ 20 ದಿನಗಳ ಕಾಲಾವಕಾಶ ವಿಸ್ತರಿಸಲಾಗಿದೆ. ಇದರ ಸದುಪಯೋಗ ಪಡೆಯಬೇಕು ಎಂದು ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.