i
ಭೀಕರ ಅಪಘಾತ, ಮೂರು ಮುಖ್ಯ ಪೇದೆಗಳಿಗೆ ಗಂಭೀರ ಗಾಯ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು 3 ಮಂದಿ ಮುಖ್ಯ ಪೊಲೀಸ್ ಪೇದೆಗಳಿಗೆ ಗಂಭೀರ ಗಾಯವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಅಶೋಕ್ ಸಿದ್ದಾಪುರ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದೆ.
ಗಾಯಾಳುಗಳನ್ನು ಬೆಂಗಳೂರಿನ ಮಹಾಲಕ್ಷ್ಮಿ ಲೇ ಔಟ್ ಠಾಣೆಯ ಮುಖ್ಯಪೇದೆಗಳಾದ ಮಂಜುನಾಥ್, ನರೇಶ್, ಶ್ರೀನಿವಾಸ್ ಎಂದು ತಿಳಿದು ಬಂದಿದೆ.
ಪೊಲೀಸರು ಸಂಚರಿಸುತ್ತಿದ್ದ ಕಾರು ಲಾರಿ ಓವರ್ ಟೆಕ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಬೆಂಗಳೂರಿನಿಂದ ಬಳ್ಳಾರಿಗೆ ಪ್ರಕರಣ ಒಂದರ ವಿಚಾರಣೆಗಾಗಿ ತೆರಳುತ್ತಿದ್ದ ವೇಳೆ ಅಪಘಾತವಾಗಿದೆ. ಗಾಯಾಳುಗಳನ್ನು ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.