i
ಜ.20 ರಂದು ಕ್ರೀಡಾ ಸಾಂಸ್ಕೃತಿಕ ಹಾಗೂ ಎನ್ಎಸ್ಎಸ್ ಘಟಕಗಳ ಸಮಾರೋಪ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ ಜನವರಿ-20 ರಂದು ಶುಕ್ರವಾರ ಬೆಳಗ್ಗೆ 10.30 ಗಂಟೆಗೆ ಕಾಲೇಜಿನ 2022-23 ಸಾಲಿನ ಕ್ರೀಡಾ ಸಾಂಸ್ಕೃತಿಕ ರೋವರ್ಸ್ ಹಾಗೂ ಎನ್ಎಸ್ಎಸ್ ಘಟಕಗಳ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ ಎಂದು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಬಿ ಕೃಷ್ಣಪ್ಪ ತಿಳಿಸಿದ್ದಾರೆ.
ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪಿಯು ಉಪ ನಿರ್ದೇಶಕ ಎನ್.ರಾಜು, ವಿಶ್ರಾಂತ ಪ್ರಾಧ್ಯಾಪಕ ಡಾ.ಲೋಕೇಶ್ ಅಗಸನಕಟ್ಟೆ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಪ್ರಾಚಾರ್ಯ ಕೃಷ್ಣಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಲೇಜ್ ಅಭಿವೃದ್ಧಿ ಸಮಿತಿಯ ಪ್ರಸನ್ನಕುಮಾರ್, ಕೊಲ್ಲಿಲಕ್ಷ್ಮಿ, ಕುಮಾರ್, ಪ್ರಕಾಶ್, ಸೈಯದ್ ಅಖಿಲ್ ಷಾ ಹುಸೇನ್ ಪಾಲ್ಗೊಳ್ಳಲಿದ್ದಾರೆಂದು ಅವರು ತಿಳಿಸಿದ್ದಾರೆ.