i
SC ST ಬಿಪಿಎಲ್ ಕುಟುಂಬಗಳ ಮಾಹಿತಿ ಸಂಗ್ರಹ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳ ಬಿಪಿಎಲ್ ಕಾರ್ಡ್ ಹೊಂದಿರುವ ಪಡಿತರ ಚೀಟಿಗಳ ಬಗ್ಗೆ ಆಹಾರ ಇಲಾಖೆಯಿಂದ ಮಾಹಿತಿ ಕೇಳಿದೆ ಎನ್ನಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಬಿಪಿಎಲ್, ಅಂತ್ಯೋದಯ ಕಾರ್ಡ್ ಗಳ ಸಂಖ್ಯೆ ಹಾಗೂ ಈ ಕಾರ್ಡ್ ಗಳಲ್ಲಿ ಇರುವ ಸದಸ್ಯರ ಮಾಹಿತಿ ಒದಗಿಸುವಂತೆ ಸರ್ಕಾರದಿಂದ ಆಹಾರ ಇಲಾಖೆಗೆ ಸೂಚನೆ ನೀಡಲಾಗಿದೆ. ಈ ಹಿಂದೆ ರೇಷನ್ ಕಾರ್ಡ್ ಗೆ ಆಧಾರ್ ದೃಢೀಕರಣದೊಂದಿಗೆ ಇ-ಕೆವೈಸಿ ಮಾಡಿಸಿದ ಸಂದರ್ಭದಲ್ಲಿ ಮಾಹಿತಿ ಪಡೆಯಲಾಗಿತ್ತು. ಈ ವೇಳೆ ಕೆಲವು ಫಲಾನುಭವಿಗಳು ತಪ್ಪು ಮಾಹಿತಿ ನೀಡಿದ್ದಾರೆ ಎನ್ನಲಾಗಿದ್ದು, ಈ ಬಾರಿಯೂ ಫಲಾನುಭವಿಗಳ ಜಾತಿ ಖಚಿತ ಪಡಿಸಿಕೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ.