i
ರೈತರಿಗೆ ಗುಡ್ ನ್ಯೂಸ್, ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ 3 ಲಕ್ಷ …
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸರ್ಕಾರ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಕೃಷಿ, ಮೀನುಗಾರಿಕೆ ಮತ್ತು ಪಶುಸಂಗೋಪನೆ ಕ್ಷೇತ್ರದ ರೈತರು ಅಗತ್ಯ ಕೃಷಿ ಸಾಲವನ್ನ ಪಡೆಯಬಹುದು. ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರೈತರು ಗರಿಷ್ಠ 3 ಲಕ್ಷ ರೂಪಾಯಿ ಸಾಲ ಪಡೆಯಬಹುದು.
ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುವತ್ತ ಗಮನ ಹರಿಸಿದೆ. ರೈತರಿಗಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನ ವಿಸ್ತರಿಸಲು ಕ್ರಮಕೈಗೊಂಡಿರುವ ನಿರೀಕ್ಷೆಯ ನಡುವೆಯೇ ದೇಶದ ಎಲ್ಲಾ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನ ಒದಗಿಸುವಂತೆ ಸಾರ್ವಜನಿಕ ವಲಯದ ಬ್ಯಾಂಕ್ ಗಳ ಮುಖ್ಯಸ್ಥರಿಗೆ ಸರ್ಕಾರ ಕಟ್ಟು ನಿಟ್ಟಿನ ನಿರ್ದೇಶನ ನೀಡಿದೆ.
ಬ್ಯಾಂಕಿಂಗ್ ಕಾರ್ಯದರ್ಶಿ ವಿವೇಕ್ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬ್ಯಾಂಕಿಂಗ್ ವಲಯದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಸರ್ಕಾರ ಪಿಎಂ ಕಿಸಾನ್ ಡೇಟಾಬೇಸ್ನ ಸಹಾಯ ತೆಗೆದುಕೊಂಡು ರೈತರಿಗೆ ಅಗತ್ಯ ಸಾಲ ಒದಗಿಸಲು ಸಾರ್ವಜನಿಕ ವಲಯದ ಬ್ಯಾಂಕ್ಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಸರ್ಕಾರದ ಯೋಜನೆಗಳಲ್ಲಿ ಪಾರದರ್ಶಕತೆ ಹೆಚ್ಚಿಸಲು ಮತ್ತು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಹೆಚ್ಚಿನ ಪ್ರಯೋಜನ ಒದಗಿಸಲು ಡಿಜಿಟಲೀಕರಣ ಪ್ರಕ್ರಿಯೆಯ ಪ್ರಗತಿಯ ಕುರಿತು ಅವರು ಚರ್ಚಿಸಿದರು. ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲಗಳ ಸಂಪೂರ್ಣ ಪ್ರಯಾಣವನ್ನ ಸಮಯೋಚಿತವಾಗಿ ಡಿಜಿಟಲೀಕರಣಗೊಳಿಸಲು ಅಗತ್ಯ ಕ್ರಮಗಳನ್ನ ತೆಗೆದುಕೊಳ್ಳುವಂತೆ ಸಾರ್ವಜನಿಕ ವಲಯದ ಬ್ಯಾಂಕ್ಗಳಿಗೆ ಸೂಚಿಸಲಾಗಿದೆ.
ಈ ಸಭೆಯಲ್ಲಿ ಪ್ರಧಾನ ಮಂತ್ರಿ ಜನ್ ಧನ್ ಯೋಜನೆ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಪ್ರಧಾನ ಮಂತ್ರಿ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಗತಿ. ಮುದ್ರಾ, ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ ನಿಧಿ, ಅಗ್ರಿ ಕ್ರೆಡಿಟ್ ಇತ್ಯಾದಿಗಳನ್ನು ಸಹ ಪರಿಶೀಲಿಸಲಾಯಿತು ಎಂದು ತಿಳಿದು ಬಂದಿದೆ.