i
ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೆ ತರುವ ಭರವಸೆ ನೀಡಿದೆ.
ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ ವಿರೋಧಿ ಉಗ್ರ ಪ್ರತಿಭಟನೆ ನಡೆಸಿ ಹಳೇ ಪಿಂಚಣಿ ಯೋಜನೆ ಜಾರಿಗಾಗಿ ಆಗ್ರಹಿಸುತ್ತಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಳೇ ಪಿಂಚಣಿ ಯೋಜನೆ ಮರು ಜಾರಿಗೊಳಿಸುವ ಆಶ್ವಾಸನೆಯನ್ನು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ನೀಡುವ ಮೂಲಕ ಸರ್ಕಾರಿ ನೌಕರರನ್ನು ಓಲೈಸುವ ಪ್ರಯತ್ನ ಮಾಡುತ್ತಿದ್ದಾರೆ.
ರಾಜ್ಯದ ಅಭಿವೃದ್ಧಿ ಮತ್ತು ರೈತರಿಗೆ ಎರಡು ರಾಷ್ಟ್ರೀಯ ಪಕ್ಷಗಳು ಮಾರಕವಾಗಿದ್ದು ಪ್ರಾದೇಶಿಕ ಪಕ್ಷ ಜೆಡಿಎಸ್ ಅನ್ನು ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ತರುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.