i
ಜ. 22 ರಂದು ಜಿಲ್ಲೆಯ ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆ ಇರಲ್ಲ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಚಿತ್ರದುರ್ಗ ವ್ಯಾಪ್ತಿಯಲ್ಲಿ ಜ. 22 ರಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಹಾಗೂ 220/66/11 ಕೆ.ವಿ. ಚಿತ್ರದುರ್ಗ ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ಮಾರ್ಗ ಮುಕ್ತತೆ ನೀಡಬೇಕಿರುವುದರಿಂದ ಜ.22 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಸಂಪೂರ್ಣ ಚಿತ್ರದುರ್ಗ ನಗರ, ಹೊಳಲ್ಕೆರೆ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಹಿರೇಗುಂಟನೂರು, ಬಾಲೇನಹಳ್ಳಿ, ಭರಮಸಾಗರ, ಸಿರಿಗೆರೆ, ವಿಜಾಪುರ, ಪಂಡರಹಳ್ಳಿ, ಹೆಚ್.ಟಿ. ಪುರ, ಚಿತ್ರಹಳ್ಳಿ ಮತ್ತು ಸುತ್ತಮುತ್ತಲಿನ ಹಳ್ಳಿಗಳ್ಳಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.