i
BPL ಕುಟುಂಬಗಳಿಗೆ ಗುಡ್ ನ್ಯೂಸ್, ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ವಿತರಣೆ…
ಚಂದ್ರವಳ್ಳಿ ನ್ಯೂಸ್, ಹೊಸಕೋಟೆ:
ಫೆಬ್ರವರಿ ತಿಂಗಳಿನಿಂದ ಪಡಿತರೆ ವಿತರಣೆ ಪ್ರಮಾಣವನ್ನು 10 ಕೆಜಿಗೆ ಹೆಚ್ಚಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಸಹಯೋಗದಲ್ಲಿ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಅವರು ರಾಗಿಯ ರಾಶಿಗೆ ಪೂಜೆ ಸಲ್ಲಿಸಿ, ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಬಿಪಿಎಲ್ ಕುಟುಂಬಗಳ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ. ಬಡ ನಿವೇಶನ ರಹಿತರ ಹಕ್ಕುಗಳನ್ನು ಕಾಯಲು ಸರ್ಕಾರ ಬದ್ಧವಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬರುತ್ತಿದ್ದ ಪಡಿತರ ಸ್ಥಗಿತವಾಗಿರುವದರಿಂದ ಪಡಿತರ ವಿತರಣೆ ಪ್ರಮಾಣ ಇಳಿಕೆಯಾಗಿದೆ. ಪುನಃ ಈ ಪ್ರಮಾಣ ಹೆಚ್ಚಿಸಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಪ್ರತಿ ತಿಂಗಳು ಸುಮಾರು 10 ಸಾವಿರ ಕೋಟಿ ರೂ.ಪಿಂಚಣಿಗಳ ವಿತರಣೆಯಾಗುತ್ತಿದೆ ಎಂದು ಹೇಳಿದರು.