i
ಕಿರಿಯ ಇಂಜಿನಿಯರ್ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗವು ಲೋಕೋಪಯೋಗಿ ಇಲಾಖೆಯಲ್ಲಿನ ಗ್ರೂಪ್ ‘ಸಿ‘ ವೃಂದದ ಕಿರಿಯ ಇಂಜಿನಿಯರ್ (ಸಿವಿಲ್) 325+05 ಹೈ.ಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಕಟ್-ಆಫ್ ಅಂಕಗಳನ್ನು ಜನವರಿ 18 ರಂದು ಆಯೋಗದ ವೆಬ್ ಸೈಟ್ http://kpsc.kar.nic.in/Lists ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಪ್ರಕಟಿಸಿದ ದಿನಾಂಕದಿಂದ 07 ದಿನಗಳೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001 ಇವರಿಗೆ ಸಂಬಂಧಿತ ಹುದ್ದೆಯ ಹೆಸರನ್ನು ಸ್ಪಷ್ಟವಾಗಿ ನಮೂದಿಸಿ ಲಿಖಿತ ರೂಪದಲ್ಲಿ ಸಲ್ಲಿಸಲು ಹಾಗೂ 07 ದಿನಗಳ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕಲೋಕ ಸೇವಾ ಆಯೋಗದ ಕಾರ್ಯದರ್ಶಿ ಸುರಳ್ಕರ್ ವಿಕಾಸ್ ಕಿಶೋರ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.