i
ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಬಹುಕಾರ್ಯಕ (ತಾಂತ್ರಿಕವಲ್ಲದ) ಎಂಟಿಎಸ್ ಮತ್ತು ಹವಾಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಶನ್ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿದ್ದು, ಕನ್ನಡವೂ ಸೇರಿದಂತೆ 13 ಪ್ರಾಂತೀಯ ಭಾಷೆಗಳಲ್ಲಿ ಲಭ್ಯವಿರಲಿದೆ.
ಅರ್ಜಿಯನ್ನು https://ssc.nic.in ಲಿಂಕ್ನಲ್ಲಿ ಫೆಬ್ರವರಿ 17, 2023 ರೊಳಗೆ ಸಲ್ಲಿಸಬೇಕು. ಸಂಪರ್ಕಕ್ಕಾಗಿ 080-25502520, 9483862020 ನ್ನು ಸೋಮವಾರದಿಂದ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂಪರ್ಕಿಸಬಹುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಎಸ್ಎಸ್ಸಿ ಮುಖ್ಯ ಕಚೇರಿ ನವದೆಹಲಿಯ ವೆಬ್ಸೈಟ್ https://ssc.nic.in ಮತ್ತು ಎಸ್ಎಸ್ಸಿ ಕರ್ನಾಟಕ-ಕೇರಳ ಪ್ರದೇಶದ ವೆಬ್ಸೈಟ್ www.ssckkr.kar.nic.in ನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.