i
ಮೊರಾರ್ಜಿ ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶಾತಿಗೆ ಅವಧಿ ವಿಸ್ತರಣೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2023-24ನೇ ಸಾಲಿನ 6ನೇ ತರಗತಿಗೆ ಪ್ರವೇಶಾತಿಗೆ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 02 ರವರೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿಗಳನ್ನು ಜನವರಿ 05 ರಿಂದ 22 ರವರೆಗೆ ಸಲ್ಲಿಸಲು ತಿಳಿಸಲಾಗಿತ್ತು. ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರ 21-01-2023 ರ ಪತ್ರದ ಅನ್ವಯ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು 02-02-2023ರ ವರೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.