i
ಇಂದು ದಕ್ಷಿಣ ಒಳನಾಡಿನ ಹಲವೆಡೆ ಮಳೆ ಸಾಧ್ಯತೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬದಲಾದ ಹವಾಮಾನದಿಂದಾಗಿ ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಂದಿನಂತೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4 ರಿಂದ 5 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.