
ಪತ್ನಿ ಶೀಲ ಶಂಕಿಸಿ ಕತ್ತು ಕೊಯ್ದು ಕೊಲೆ ಮಾಡಿದ ಪತಿ…
ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತ ಪಡಿಸಿದ ಪತಿ ಚಾಕುವಿನಿಂದ ಕತ್ತು ಕೊಯ್ದು ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಕೋಳಿವಾಡ ಗ್ರಾಮದಲ್ಲಿ ನಡೆದಿದೆ.
ಶಾರದಾ ದೇವರಮನಿ ಕೊಲೆಯಾದ ದುರ್ದೈವಿಯಾಗಿದ್ದಾಳೆ. ಪತಿ ಉಡಚಪ್ಪ ದೇವರಮನೆ ಕೊಲೆ ಮಾಡಿ ಪರಾರಿ ಆಗಿದ್ದಾನೆ.
ನಿತ್ಯ ಮದ್ಯ ಸೇವಿಸಿ ಬಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿ ಜಗಳ ವಿಕೋಪಕ್ಕೆ ಹೋಗಿ ಕೊಲೆಯಲ್ಲಿ ಅಂತ್ಯವಾಗಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮಾಂತರ ಠಾಣೆ ಪೊಲೀಸರ ಬೇಟಿ, ಪರಿಶೀಲನೆ ಮಾಡಿದ್ದು ಕೊಲೆ ಆರೋಪಿ ಬಂಧನಕ್ಕೆ ಬಲೆ ಬಿಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.