i
ಕಾಂಗ್ರೆಸ್ ಪಕ್ಷದ 10 ಶಾಸಕರು ಮತ್ತು ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ…
ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಕಾಂಗ್ರೆಸ್ ಪಕ್ಷದ 10ಕ್ಕೂ ಹೆಚ್ಚಿನ ಹಾಲಿ ಶಾಸಕರು ಬಿಜೆಪಿ ಪಕ್ಷ ಸೇರಲು ಆಸಕ್ತಿ ತೋರಿಸಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದ ಬಿಜೆಪಿ ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಈಗಾಗಲೇ ಮುಖ್ಯಮಂತ್ರಿಗಳು ಮತ್ತು ನಾನು ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರೊಂದಿಗೆ ಎರಡು ದಿನಗಳಿಂದೆ ಮಾತುಕತೆ ನಡೆಸಿದ್ದು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ 70 ಸ್ಥಾನ ಗೆಲ್ಲುವುದು ಕೂಡ ಕಷ್ಟ ಎಂದು ಹೇಳಿದ್ದಾರೆ. 123 ಸ್ಥಾನಗಳಿಸುವುದಾಗಿ ಹೇಳುತ್ತಿರುವ ಜೆಡಿಎಸ್ 13 ಸ್ಥಾನ ಗೆದ್ದರೆ ದೊಡ್ಡದು. ಬಿಜೆಪಿ 120ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಜಯಗಳಿಸಿ ಮತ್ತೆ ಸರ್ಕಾರ ರಚಿಸಲಿದೆ. ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಸೇರಲು ಆಹ್ವಾನಿಸಿದ್ದೇವೆ. ನಾನು ಕೂಡ ಅವರೊಂದಿಗೆ ಮಾತನಾಡಿದ್ದೇನೆ ಎಂದು ಅಶೋಕ್ ತಿಳಿಸಿದ್ದಾರೆ.