i
ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿ ಉತ್ತೀರ್ಣರಾದ 05 ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಉಚಿತವಾಗಿ ಲ್ಯಾಪ್ಟಾಪ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ಪಾಟೀಲ್ ಅವರು ಇದೇ ಸಂದರ್ಭದಲ್ಲಿ ವಿತರಿಸಿದರು.
ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿ.ಪಂ ಸಿಇಓ ಎಂ.ಎಸ್.ದಿವಾಕರ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಕುಮಾರಸ್ವಾಮಿ, ಜಿ.ಪಂ.ಉಪಕಾರ್ಯದರ್ಶಿ ಡಾ. ರಂಗಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.